ಮಳೆ ಹಾನಿ ಪ್ರದೇಶಗಳ ಭೇಟಿ ನೀಡಿ ಪರಿಶೀಲನೆ : ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್
ನಗರದಲ್ಲಿ ನಿನ್ನೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಇಂದು ಯಲಹಂಕ ವಲಯದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಪರಿಶೀಲನೆ:
ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಗೆ ಭೇಟಿ ನೀಡಿ ಪ್ರಸ್ತುತ ಸುಮಾರು 3 ಅಡಿ ನೀರು ನಿಂತಿದ್ದು, ಕೂಡಲೆ ಅಗತ್ಯ ಕ್ರಮಗಳನ್ನು ಕೈಗೊಂಡು ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
- ಸದ್ಯ ಇರುವ ನೀರುಗಾಲುವೆಯ ಪಕ್ಕ ಖಾಸಗಿ ಜಾಗದಲ್ಲಿ ಇಟಾಚಿ ಮೂಲಕ ಕಚ್ಚಾ ಡ್ರೈನ್ ಮಾಡಲಾಗುತ್ತಿದ್ದು, ಕೂಡಲೆ ಕೆಲಸ ಮುಗಿಸಿ ಕಚ್ಚಾ ಡ್ರೈನ್ ಮೂಲಕ ನೀರು ಹರಿದು ಹೊಗುವಂತೆ ಮಾಡಲಾಗುತ್ತಿದೆ.
- 02 ಅಗ್ನಿ ಶಾಮಕ ವಾಹನಗಳಿಂದ ಪಂಪ್ ಮೂಲಕ ನೀರನ್ನು ಹೊರ ಹಾಕಲಾಗುತ್ತಿದೆ.
- ನಿನ್ನೆ ಸಂಜೆ ಸಹಾಯ ಕೇಂದ್ರ(Help Desk) ತೆಗಯಲಾಗಿದ್ದು, ನಿವಾಸಿಗಳಿಗಳಿಗೆ ಕುಡಿಯುವ ನೀರು, ಹಾಲು, ಬ್ರೆಡ್, ಬಿಸ್ಕೆಟ್ ಇನ್ನಿತರೆ ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ.
- ಅಪಾರ್ಟ್ಮೆಂಟ್ ನಿಂದ ನಿವಾಸಿಗಳು ಹೊರ ಬರಲು ಹಾಗೂ ಒಳ ಹೋಗಲು 2 ಟ್ರ್ಯಾಕ್ಟರ್ ಗಳ ವ್ಯವಸ್ಥೆ ಮಾಡಲಾಗಿದೆ.
- ಯಲಹಂಕ ಕೆರೆಗೆ ಎರಡು ಕೋಡಿಗಳಿದ್ದು, ಉತ್ತರ, ದಕ್ಷಿಣದಲ್ಲಿ ಕೋಡಿಗಳು ಬರಲಿದೆ. ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಕಡೆಗೆ ಉತ್ತರ ಕೋಡಿ ಬರಲಿದ್ದು, ಅಲ್ಲಿ ನೀರಿನ ಹರಿವನ್ನು ಕಡಿಮೆ ಮಾಡಬೇಕಿದೆ. ಈ ಸಂಬಂಧ ದಕ್ಷಿಣದ ಕೋಡಿಯಲ್ಲಿ ನೀರಿನ ಹರಿವಿನ ಮಟ್ಟ ಹೆಚ್ಚಿಸಿದಾಗ ಉತ್ತರದ ಕೋಡಿಯಲ್ಲಿ ನೀರಿನ ಹರಿವಿನ ಮಟ್ಟ ಕಡಿಮೆಯಾಗಲಿದೆ. ಆದ್ದರಿಂದ ಕೂಡಲೆ ಸೂಕ್ತ ಕ್ರಮ ಕೈಗೊಳ್ಳ ಸೂಚನೆ ನೀಡಿದರು.
- 20ಕ್ಕೂ ಹೆಚ್ಚು ಅಧಿಕಾರಿ/ಸಿಬ್ಬಂದಿಗಳು ಸ್ಥಳದಲ್ಲಿದ್ದು, ಸಮಸ್ಯೆಯನ್ನು ಬಗೆಹರಿಸುವಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ರಮಣಶ್ರೀ ಕ್ಯಾಲಿಫೋರ್ನಿಯಾ ಲೇಔಟ್ ಪರಿಶೀಲನೆ:
- ಲೇಔಟ್ ಗೆ ಬರುವತ್ತಿರುವ ನೀರುನ್ನು ತಡೆಯುವ ಸಲುವಾಗಿ ಹಿಂದೆಯೇ ಡೈವರ್ಷನ್ ಚಾನಲ್ ಮಾಡಲಾಗಿದ್ದು, ನೀರಿನ ಮಟ್ಟವನ್ನು ಸಾಕಷ್ಟು ತಡೆಯಲಾಗಿದೆ.
- ರಮಣಶ್ರೀ ಕ್ಯಾಲಿಫೋರ್ನಿಯಾ ಲೇಔಟ್ ನಲ್ಲಿ ನಿಂತಿರುವ ನೀರುನ್ನು ಕೂಡಲೆ ತೆರವುಗೊಳಿಸಲು ಸೂಚನೆ ನೀಡಿದರು.
- ಲೇಔಟ್ ನಿಂತಿರುವ ನೀರನ್ನು ಪಂಪ್ ಮೂಲಕ ತೆರವುಗೊಳಿಸಲಾಗುತ್ತಿದೆ.
ಸಮಸ್ಯೆಯಾಗಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಲು ಸೂಚನೆ:
ಮಳೆಯಾಗುತ್ತಿರುವ ಹಿನ್ನೆಲೆ ಮುಖ್ಯ ಆಯುಕ್ತರು ಇಂದು ಬೆಳಗ್ಗೆ ವರ್ಚುವಲ್ ಮೂಲಕ ಸಭೆ ನಡೆಸಿ, ಆಯಾ ವಲಯ ವ್ಯಾಪ್ತಿಯಲ್ಲಿ ಸಮಸ್ಯೆಯಾಗಿರುವ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಸ್ಥಳದಲ್ಲಾಗಿರುವ ಸಮಸ್ಯೆ ಬಗ್ಗೆ ಅವಲೋಕಿಸಿ ಆ ಸ್ಥಳದಲ್ಲಿ ಶಾಶ್ವತ ಪರಿಹಾರ ಹುಡುಕಿ, ಇರುವ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಲ್ಲಾ ವಲಯಗಳ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಾಗರೀಕರಿಂದ ಬರುವ ದೂರುಗಳಿಗೆ ಕೂಡಲೆ ಸ್ಪಂದಿಸಲು ಸೂಚನೆ ನೀಡಿದರು.
ಈ ವೇಳೆ ವಲಯ ಆಯುಕ್ತರಾದ ಕರೀಗೌಡ, ವಲಯ ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿಮ್, ಮುಖ್ಯ ಅಭಿಯಂತರರಾದ ರಂಗನಾಥ್, ಕಾರ್ಯಪಾಕಲಕ ಅಭಿಯಂತರರಾದ ಸುಧಾಕರ್ ರೆಡ್ಡಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.