ಇತ್ತೀಚಿನ ಸುದ್ದಿ
ಬಿ.ಆರ್.ಅಂಬೇಡ್ಕರ್ ರವರ 68ನೇ ವರ್ಷದ ಮಹಾ ಪರಿನಿಬ್ಬಾಣ ದಿನಾಚರಣೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ರವರ 68ನೇ ವರ್ಷದ ಮಹಾ ಪರಿನಿಬ್ಬಾಣ ದಿನಾಚರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾಲಾರ್ಪಣೆ ಮಾಡಿ ಪುಷ್ಪನಮನ ಅರ್ಪಿಸಿದರು.
ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ ಹರೀಶ್ ಕುಮಾರ್, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಜಂಟಿ ಆಯುಕ್ತರಾದ ಲಕ್ಷ್ಮಿ ದೇವಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.