ಇತ್ತೀಚಿನ ಸುದ್ದಿ

ದಕ್ಷಿಣ ವಲಯದಲ್ಲಿ ಮುಖ್ಯ ಆಯುಕ್ತರ ನಡೆ ವಲಯದ ಕಡೆ

ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ ನಾಳೆ(ದಿ:12-11-2024) ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮ ನಡೆಸಲಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಸಾರ್ವಜನಿಕರಿಗೆ ಅನುಕೂಲವಾಗಲೆಂದು ಹಾಗೂ ವಲಯ ಮಟ್ಟದಲ್ಲಿ ನಡೆಯುತ್ತಿರುವ ಕಾರ್ಯಚಟುವಟಿಕೆಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸುವ ಸಲುವಾಗಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅದರಂತೆ, ದಕ್ಷಿಣ ವಲಯ ವ್ಯಾಪ್ತಿಯ ವಲಯ ಆಯುಕ್ತರ ಕಛೇರಿಯ ಸಭಾಂಗಣ ಕೊಠಡಿಯಲ್ಲಿ ನಾಳೆ ಬೆಳಗ್ಗೆ 10.00 ರಿಂದ ಅಪರಾಹ್ನ 12.00 ಗಂಟೆಯವರೆಗೆ ಸಾರ್ವಜನಿಕರ ಕುಂದು ಕೊರತೆಗಳನ್ನು ಮುಖ್ಯ ಆಯುಕ್ತರು ಖುದ್ದು ಆಲಿಸಲಿದ್ದಾರೆ.

ಜಯನಗರ 2ನೇ ಬ್ಲಾಕ್ ನಲ್ಲಿ ಬರುವ ವಲಯ ಕಛೇರಿಯ 2ನೇ ಮಹಡಿಯಲ್ಲಿರುವ ಸಭಾಂಗಣ ಕೊಠಡಿಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲಿದ್ದು, ದಕ್ಷಿಣ ವಲಯ ವ್ಯಾಪ್ತಿಯ ನಾಗರೀಕರು ಆಗಮಿಸಿ ತಮ್ಮ ಕುಂದು-ಕೊರತೆಗಳನ್ನು ಮುಖ್ಯ ಆಯುಕ್ತರ ಬಳಿ ಸಲ್ಲಿಸಬಹುದಾಹಿದೆ.

ಈ‌ ವೇಳೆ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು ಸೇರಿದಂತೆ ಎಲ್ಲಾ ವಿಭಾಗದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button