ಇತ್ತೀಚಿನ ಸುದ್ದಿ
Trending

ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್!

ಬೆಂಗಳೂರು, (ಏಪ್ರಿಲ್ 03): ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ (Prajwal Revanna)   ಕೋರ್ಟ್​ ಶಾಕ್ ನೀಡಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಪ್ರಕರಣದಿಂದ ಕೈಬಿಡಲು ಪ್ರಜ್ವಲ್ ರೇವಣ್ಣ ಕೋರಿದ್ದ ಅರ್ಜಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ (Bengaluru Special Court) ವಜಾಗೊಳಿಸಿ ಆದೇಶ ಹೊರಡಿಸಿದೆ. ಇನ್ನು ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಏಪ್ರಿಲ್​ 9ಕ್ಕೆ ಮುಂದೂಡಿದೆ.

ಎಲೆಕ್ಟ್ರಾನಿಕ್ ಎವಿಡೆನ್ಸ್ ಅಥವಾ ಮೊಬೈಲ್ ಫೋನ್‌ನಿಂದ ವಶಪಡಿಸಿಕೊಂಡಿರುವ ಫೋಟೋ, ವಿಡಿಯೋಗಳು ಒದಗಿಸುವಂತೆ ಕೋರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿತ್ತು. ಅಲ್ಲದೇ ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟು, ಪ್ರಜ್ವಲ್ ರೇವಣ್ಣ ಅರ್ಜಿ ಇತ್ಯರ್ಥಪಡಿಸಿತ್ತು.

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಈ ನಾಲ್ಕು ಪ್ರಕರಣದ ಜಾಮೀನು ಅರ್ಜಿಗಳು ಸಹ ವಜಾಗೊಂಡಿವೆ. ಅಶ್ಲೀಲ ದೃಶ್ಯ ಪ್ರಕರಣ ಸೇರಿದಂತೆ ಇತರೆ ಒಟ್ಟು ನಾಲ್ಕು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (Special Investigation Team) ಆಗಸ್ಟ್​ನಲ್ಲಿ 2,144 ಪುಟಗಳ ಚಾರ್ಜ್​​​ಶೀಟ್​ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಸಹ ಜಾಮೀನಿಗಾಗಿ ಕೆಳಗಿನ ಕೋರ್ಟ್​ನಲ್ಲಿ ಕಸರತ್ತು ನಡೆಸಿದ್ದರು.

ಹಾಸನದ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹಾಸನದ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಸೇರಿ ಮತ್ತಿತರರ ವಿರುದ್ಧ ಬೆಂಗಳೂರಿನ ಸೈಬರ್ ಅಪರಾಧ ಠಾಣೆಯಲ್ಲಿ ವಿವಿಧ ಐಪಿಸಿ ಸೆಕ್ಷನ್‌ಗಳು ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ವಿಶೇಷ ತನಿಖಾ ದಳದ ತನಿಖೆಗೆ ವಹಿಸಲಾಗಿದ್ದು, ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್​ಡ್ರೈವ್​ಗಳನ್ನು ಹಾಸನದಲ್ಲಿ ಹಂಚಿಕೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ ಕೆಲ ಅಶ್ಲೀಲ ವಿಡಿಯೋಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇನ್ನು ಈ ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್​ನಲ್ಲಿ ಜಾಮೀನು ರದ್ದಾಗಿದ್ದು, ಸದ್ಯ ಪ್ರಜ್ವಲ್​ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button