ಇತ್ತೀಚಿನ ಸುದ್ದಿ
Trending

ಆರ್​ಸಿಬಿ vs ಪಂಜಾಬ್ ಕಿಂಗ್ಸ್ ನಡುವೆ ನಾಳೆ ಮತ್ತೆ ಪಂದ್ಯ

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಪಂಜಾಬ್ ಕಿಂಗ್ಸ್ (PBKS) ತಂಡ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು 5 ವಿಕೆಟ್​ಗಳಿಂದ ಮಣಿಸುವಲ್ಲಿ ಶ್ರೇಯಸ್ ಅಯ್ಯರ್ ಪಡೆ ಯಶಸ್ವಿಯಾಗಿದೆ. ಈ ಮ್ಯಾಚ್​ನೊಂದಿಗೆ ಉಭಯ ತಂಡಗಳು ಐಪಿಎಲ್​ನ ಮೊದಲಾರ್ಥ ಪೂರ್ಣಗೊಳಿಸಿದೆ. ಇದೀಗ ದ್ವಿತೀಯಾರ್ಧದ ಮೊದಲ ಪಂದ್ಯದಲ್ಲೇ ಉಭಯ ತಂಡಗಳು ಮುಖಾಮುಖಿಯಾಗಲಿದೆ. ಅದು ಕೂಡ ನಾಳೆ (ಏಪ್ರಿಲ್ 20) ಎಂಬುದು ವಿಶೇಷ.ಐಪಿಎಲ್​ ಮ್ಯಾನೇಜ್ಮೆಂಟ್ ರೂಪಿಸಿರುವ ವೇಳಾಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್​ ತಂಡಗಳಿಗೆ ಬ್ಯಾಕ್ ಟು ಬ್ಯಾಕ್ ಪಂದ್ಯಗಳನ್ನು ನಿಗದಿ ಮಾಡಲಾಗಿದೆ. ಅದರಂತೆ ಉಭಯ ತಂಡಗಳು ಭಾನುವಾರ ಮತ್ತೆ ಮುಖಾಮುಖಿಯಾಗಬೇಕಿದೆ.

ಈ ಪಂದ್ಯವು ಪಂಜಾಬ್ ಕಿಂಗ್ಸ್ ತಂಡದ ತವರು ಮೈದಾನದಲ್ಲಿ ನಡೆಯಲಿದೆ. ಅಂದರೆ ಚಂಡೀಗಢ್​ನ ಮುಲ್ಲನ್​ಪುರ್ ಸ್ಟೇಡಿಯಂನಲ್ಲಿ ಆರ್​ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಲಿದೆ.ಏಪ್ರಿಲ್ 20 ರಂದು, ಭಾನುವಾರ ಸಂಜೆ 3.30 ಕ್ಕೆ ಈ ಮ್ಯಾಚ್ ಶುರುವಾಗಲಿದ್ದು, ಇದಕ್ಕಾಗಿ ಉಭಯ ತಂಡಗಳು ಶನಿವಾರ ಬೆಂಗಳೂರಿನಿಂದ ಚಂಡೀಗಢ್​ನತ್ತ ಪ್ರಯಾಣ ಬೆಳೆಸಲಿದೆ. ಅಂದರೆ ಉಭಯ ತಂಡಗಳ ನಡುವಣ ಮುಖಾಮುಖಿಗೆ ಕೇವಲ ಒಂದು ದಿನಗಳ ಬಿಡುವು ಮಾತ್ರ ಇದೆ.ಇತ್ತ ಕಳೆದ ಪಂದ್ಯದಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಾಳಿನ (ಏ.20) ಪಂದ್ಯದಲ್ಲಿ ಗೆಲ್ಲುವ ಮೂಲಕ ಸೇಡು ತೀರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊದಲ ಮುಖಾಮುಖಿಯಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡರು. ಮಳೆಯ ಕಾರಣ 14 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.ಅದರಲ್ಲೂ ಕೇವಲ 63 ರನ್​ಗಳಿಗೆ 9 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಸ್ಪೋಟಕ ಇನಿಂಗ್ಸ್ ಆಡಿದ ಟಿಮ್ ಡೇವಿಡ್ 26 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 50 ರನ್ ಬಾರಿಸಿದರು. ಈ ಮೂಲಕ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 95 ರನ್ ಕಲೆಹಾಕಿತು.ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 12.1 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 98 ರನ್ ಬಾರಿಸಿ ಐದು ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಮೊದಲಾರ್ಥವನ್ನು ಜಯದೊಂದಿಗೆ ಅಂತ್ಯಗೊಳಿಸಿದೆ. ಇದೀಗ ಭಾನುವಾರ ನಡೆಯಲಿರುವ ದ್ವಿತೀಯಾರ್ಧ ಮೊದಲ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಬೇಕಿದೆ.

Related Articles

Leave a Reply

Your email address will not be published. Required fields are marked *

Back to top button