ಇತ್ತೀಚಿನ ಸುದ್ದಿ
Trending

ಹರಿದಿನಗಳು, ಜಾತ್ರೆ-ರಥೋತ್ಸವಗಳು ನಮ್ಮ ಭಾರತೀಯ ಸಂಸ್ಕೃತಿಯ

ಕೆ.ಆರ್.ಪೇಟೆ: ಹಬ್ಬ-ಹರಿದಿನಗಳು, ಜಾತ್ರೆ-ರಥೋತ್ಸವಗಳು ನಮ್ಮ ಭಾರತೀಯ ಸಂಸ್ಕೃತಿಯ ಪ್ರತಿಬಿಂಬಗಳಾಗಿದ್ದು ಇವುಗಳನ್ನು ಉಳಿಸಿಬೆಳೆಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಮಾಜ ಸೇವಕರಾದ ಆರ್.ಟಿ.ಓ ಮಲ್ಲಿಕಾರ್ಜುನ್ ಹೇಳಿದರು.

ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಅಣ್ಣೇಚಾಕನಹಳ್ಳಿ ಗ್ರಾಮದಲ್ಲಿ ಶ್ರೀ ಅಂಕಲಿಂಗೇಶ್ವರ ಉತ್ಸವ ಮತ್ತು ರಂಗದ ಹಬ್ಬದ ಹಿನ್ನಲೆ ಗ್ರಾಮದೇವರ ವಿಶೇಷ ಪೂಜಾ ಕಾರ್ಯಕ್ರಮದ ಭಾಗವಹಿಸಿ ಮಾತನಾಡಿದರು. ಹಬ್ಬ-ಹರಿದಿನಗಳು, ಜಾತ್ರೆ-ರಥೋತ್ಸವಗಳು ನಮ್ಮ ಭಾರತೀಯ ಸಂಸ್ಕೃತಿಯ ಪ್ರತಿಬಿಂಬಗಳಾಗಿದ್ದು ಇವುಗಳನ್ನು ಉಳಿಸಿಬೆಳೆಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಆದರೆ ಇತ್ತೀಚೆಗೆ ಸಿನಿಮಾ ಮತ್ತು ಟಿವಿ ಧಾರಾವಾಹಿಗಳ ಹಾವಳಿಯಿಂದ ಜಾನಪದ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳು ಕಡಿಮೆಯಾಗುತ್ತಿ ರುವ ಈ ಸಂದರ್ಭದಲ್ಲಿ ಇವುಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯ ವಾಗಿದೆ. ಜಾತ್ರೆ ಉತ್ಸವಗಳು ನಗರ ಪ್ರದೇಶಗಲ್ಲಿ ಕಣ್ಮರೆಯಾಗಿವೆ. ಗ್ರಾಮೀಣ ಪ್ರದೇಶದಲ್ಲಿ ಇನ್ನೂ ಸಹ ಜನಪದ ಸೊಗಡು ಉಳಿದುಕೊಂಡಿದೆ. ಇದನ್ನು ಪ್ರೋತ್ಸಾಹಿಸಿ ಸಂರಕ್ಷಣೆ ಮಾಡಿಕೊಳ್ಳ ದಿದ್ದಲ್ಲಿ ನಮ್ಮ ಸಂಸ್ಕೃತಿಕ ಪ್ರತಿಬಿಂಬಗಳು ನಾಶವಾಗುವ ಅಪಾಯ ಇದೆ. ಇಂತಹ ಕಲೆಗಳನ್ನು ಪ್ರತಿಯೊಬ್ಬರು ಪ್ರೋತ್ಸಾಹ ನೀಡಬೇಕು ಎಂದು ಒತ್ತಾಯ ಮಾಡಿದರು.

ರಂಗಸ್ಥಳದಲ್ಲಿ ಗ್ರಾಮದ ಆರಾಧ್ಯ ದೈವ ಶ್ರೀ ಅಂಕಲಿಂಗೇಶ್ವರ ಸ್ವಾಮಿಯ ಪೂಜಾ ಮಹೋತ್ಸವ, ನಂತರ ದೇವಸ್ಥಾನ ಮುಂಭಾಗದ ರಂಗದಲ್ಲಿ ಜಾತಿಭೇದ, ವಯಸ್ಸಿನ ಅಂತರವಿಲ್ಲದೆ ಗ್ರಾಮದ ಜನರು ತಮಟೆಯ ಸದ್ದಿಗೆ ಹೆಜ್ಜೆ ಹಾಕುವ ಮೂಲಕ ನಮ್ಮ ಪೂರ್ವಜರು ನಡೆಸಿಕೊಂಡು ಬಂದಿರುವ ಸಂಪ್ರದಾಯವನ್ನು ಮೆರೆದರು.ರಂಗದ ಹಬ್ಬದ ಸಂಭ್ರಮದಲ್ಲಿ ಗ್ರಾಮದ ಜನತೆಯೊಂದಿಗೆ ಸುತ್ತಮುತ್ತಲಿನ ಗ್ರಾಮದ ಜನರೂ ಪಾಲ್ಗೊಂಡಿದ್ದರು. ಗ್ರಾಮದ ರಾಜಬೀದಿಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತುದ್ದವು ಗ್ರಾಮದ ಮುಖಂಡರು ನೇತೃತ್ವ ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಕಾಂತರಾಜು, ಮುಖಂಡರುಗಳಾದ ತಮ್ಮೇಗೌಡ, ಚಂದ್ರಹಾಸ, ಸಂತೋಷ, ಗುರು, ದಿನೇಶ್, ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button