ಇತ್ತೀಚಿನ ಸುದ್ದಿ
Trending

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೇ 11ರವರೆಗೂ ಮಳೆ

ಬೆಂಗಳೂರು: ಕರ್ನಾಟಕದ ಹಲವೆಡೆ ಮೇ11ರವರೆಗೂ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡು ದಿನಗಳ ಬಿಡುವು ಪಡೆದು ಮೇ 7ರಿಂದ ಮಳೆ ಮತ್ತೆ ಚುರುಕಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮನರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಭಾನುವಾರ ಮಂಗಳೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 42.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 41.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 40.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 37.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 42.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button