ಇತ್ತೀಚಿನ ಸುದ್ದಿ
Trending

ಇಂದಿನಿಂದ ಬೆಂಗಳೂರಿನಲ್ಲಿ ಮಳೆ, ಕರ್ನಾಟಕದ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, ಏಪ್ರಿಲ್ 03: ಇಂದಿನಿಂದ ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯಲ್ಲಿ ಗಾಳಿ 30-40 ಕಿ,ಮೀ ವೇಗದಲ್ಲಿ ಬೀಸಿದರೆ, ಉತ್ತರ ಒಳನಾಡಿನಲ್ಲಿ 50-60 ಕಿ.ಮೀ ವೇಗದಲ್ಲಿ ಬೀಸಲಿದೆ. ದಕ್ಷಿಣ ಒಳನಾಡಿನಲ್ಲಿ ಕೂಡ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button