
ಮೈಸೂರು, ಏಪ್ರಿಲ್ 05: ದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ರನ್ನು (Ashwini Vaishnaw) ಭೇಟಿ ಮಾಡಿರುವ ಸಂಸದ ಯದುವೀರ್ ಒಡೆಯರ್ (Yaduveer Krishnadatta Chamaraja Wadiyar) ಮೈಸೂರಿನ ರೈಲ್ವೆ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮನವಿ ಮಾಡಿದ್ದಾರೆ. ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣಗೊಳಿಸುವುದು ಮತ್ತು ಏರ್ಪೋರ್ಟ್ ವಿಸ್ತರಣೆಗೆ ಅನುಕೂಲವಾಗುವಂತೆ ರೈಲ್ವೆ ಹಳಿ ಸ್ಥಳಾಂತರ ಬಗ್ಗೆ ಚರ್ಚೆ ಮಾಡಲಾಗಿದ್ದು, ನಮ್ಮ ಮನವಿಗೆ ಸಚಿವ ವೈಷ್ಣವ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಯದುವೀರ್ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಯದುವೀರ್, ನಿನ್ನೆ ದೇಹಲಿಯಲ್ಲಿ ಕೇಂದ್ರ ಸರ್ಕಾರದ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದೆ. ಮೈಸೂರಿನಲ್ಲಿರುವ ರೈಲ್ವೆ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಹಾಗೂ ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣಗೊಳಿಸುವ ಕುರಿತು ಮತ್ತು ಮೈಸೂರಿನಲ್ಲಿ ವಿಮಾನ ನಿಲ್ದಾಣದ ವಿಸ್ತರಣೆಗೆ ಅನುಕೂಲವಾಗುವಂತೆ ರೈಲ್ವೆ ಹಳಿಗಳ ಸ್ಥಳಾಂತರ ವಿಷಯದ ಕುರಿತು ಸಚಿವರಿಗೆ ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅವರು ಸದರಿ ಯೋಜನೆಗಳ ತ್ವರಿತ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆಂದು ತಿಳಿಸಿದ್ದಾರೆ.
ಇಂದು ದೇಹಲಿಯಲ್ಲಿ ಕೇಂದ್ರ ಸರ್ಕಾರದ ರೈಲ್ವೆ ಸಚಿವರಾದ ಸನ್ಮಾನ್ಯ ಶ್ರೀ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿˌ ಮೈಸೂರಿನಲ್ಲಿರುವ ರೈಲ್ವೆ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಹಾಗೂ ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣಗೊಳಿಸುವ ಕುರಿತು ಮತ್ತು ಮೈಸೂರಿನಲ್ಲಿ ವಿಮಾನ ನಿಲ್ದಾಣದ ವಿಸ್ತರಣೆಗೆ ಅನುಕೂಲವಾಗುವಂತೆ… pic.twitter.com/ZABpSG6Tlf
ನಮ್ಮ ಎಲ್ಲಾ ಬೇಡಿಕೆಗಳಿಗೆ, ಮೈಸೂರಿನ ಅಭಿವೃದ್ದಿ ಯೋಜನೆಗಳಿಗೆ ಸಹಕರಿಸಿ, ಬೆಂಬಲಿಸಿ ಅವುಗಳನ್ನು ಶೀಘ್ರ ಅನುಷ್ಠಾನಕ್ಕೆ ತರಲು ನೆರವಾಗುತ್ತಿರುವ ಸಚಿವರಿಗೆ ಈ ಮೂಲಕ ಮೈಸೂರು-ಕೊಡಗು ಜನತೆಯ ಪರವಾಗಿ ಸಂಸದ ಯದುವೀರ್ ಒಡೆಯರ್ ತುಂಬು ಹೃದಯದ ಧನ್ಯವಾದ ತಿಳಿಸಿದ್ದಾರೆ.