
ಮಳವಳ್ಳಿ: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ 134 ನೇ ಹುಟ್ಟುಹಬ್ಬ ಹಾಗೂ ಕವಿಗೋಷ್ಠಿ ಕಾರ್ಯಕ್ರಮ ಮಳವಳ್ಳಿ ಪಟ್ಟಣದ ಕನ್ನಡ ಭವನದಲ್ಲಿ ನಡೆಸಲಾಯಿತು.
ಕಾರ್ಯಕ್ರಮವನ್ನು ಸಾವಯವ ಕೃಷಿಕ ಸಮಾಜದ ಅಧ್ಯಕ್ಷ ಮಹೇಶಕುಮಾರ್ ಉದ್ಘಾಟಿಸಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ಗೆ ನಮ್ಮ ಸಹಕಾರ ಯಾವಾಗಲೂ ಇರುತ್ತದೆ. ಪರಿಸರ ಉಳಿಸುವ ಹಾಗೂ ಆರೋಗ್ಯ ಕಾಪಾಡಿಕೊಳ್ಳಲು ನಿಟ್ಟಿನಲ್ಲಿ ಪ್ಲಾಸ್ಟಿಕ್ ಮುಕ್ತ ಮಳವಳ್ಳಿ ಮಾಡಲು ನಾವೆಲ್ಲರೂ ಪಣತೊಡಬೇಕಾಗಿದೆ ಎಂದರು.
ಇದೇ ವೇಳೆ ಕಸಾಪ ಅಧ್ಯಕ್ಷ ಚೇತನಕುಮಾರ್ ಮಾತನಾಡಿ, ಅಂಬೇಡ್ಕರ್ ರವರ ಸಂದೇಶವನ್ನು ಸಾರಲು ಅಂಬೇಡ್ಕರ್ ದಿನಾಚರಣೆ ದಿನದಂದು ಅಂಬೇಡ್ಕರ್ ರವರ ಬಗ್ಗೆ ಕವಿಗೋಷ್ಠಿ ನಡೆಸಿ ವಿಜೇತರಿಗೆ ಪ್ರಶಸ್ತಿ ಪತ್ರ ವಿತರಣೆ ಜೊತೆಗೆ ವಿವಿದ ಕ್ಷೇತ್ರದ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಗುತ್ತಿದೆ ಎಂದರು.
ಈ ವೇಳೆ ಕಸಪಾ ಅಧ್ಯಕ್ಷ ಚೇತನಕುಮಾರ್ , ಪುಟ್ಟಸ್ವಾಮಿ, ಚುಂಚಣ್ಣ, ಸಾವಯವ ಕೃಷಿಕರ ಸಮಾಜದ ಅಧ್ಯಕ್ಷ ಮಹೇಶ ಕುಮಾರ್ ಸೇರಿದಂತೆ ಹಲವರು ಇದ್ದರು.



