ಇತ್ತೀಚಿನ ಸುದ್ದಿ
Trending

ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾಲೇಜ್ ನ ಬಿ ಎಸ್ ಸಿ ಪದವಿಯಲ್ಲಿ ಮಧು ಸಿ. ಕಾಲೇಜ್ ಗೆ ಟಾಪರ್

ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 2024 -2025 ನೇ ಸಾಲಿನ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಮೂಗೂರು ಗ್ರಾಮದ ಚಿಕ್ಕಮಾದು ಶ್ರೀಮತಿ ಗೀತಾ ದಂಪತಿಗಳ ಸುಪುತ್ರಿ ಮಧು ಸಿ. ಬಿ ಎಸ್ ಸಿ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ(MLT) ವೈದ್ಯಕೀಯ ಪದವಿ ವಿಭಾಗದಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆಯುವ ಮೂಲಕ ಟಾಪರ್ ಆಗಿ ಹೊರಹೊಮ್ಮಿ ಪದವಿ ಪ್ರಮಾಣಪತ್ರ ಸ್ವೀಕರಿಸಿ ಕಾಲೇಜಿಗೆ ಕೀರ್ತಿ ತಂದಿದ್ದು ಕಾಲೇಜಿನಲ್ಲೇ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿನಿ ಗೆ ಪದವಿ ಪ್ರಶಸ್ತಿ ಫಲಕ ಮತ್ತು ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು.
ಈ ಪದವಿ ಪ್ರದಾನ ಸಮಾರಂಭವನ್ನು ಚಾಮರಾಜನಗರ ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಪ್ರೊಫೆಸರ್ ಎಂ ಆರ್ ಗಂಗಾಧರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಿಸಿ ವಿದ್ಯಾರ್ಥಿಗಳ ಮುಂದಿನ ಜೀವನ ಮತ್ತು ವೃತ್ತಿಯಲ್ಲಿ ಕೌಶಲ್ಯತೆ ಮತ್ತು ಉತ್ತಮ ಸೇವೆ ಸಲಿಸುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ಕೀರ್ತಿ ತರಬೇಕೆಂದು ಸಲಹೆ ನೀಡಿದರು .
ಈ ಕಾರ್ಯಕ್ರಮದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾಲೇಜಿನ ಪ್ರಾಂಶುಪಾಲರಾದ ಡಾ. ತೃಪ್ತಿ ಬಿ ನಾಯಕ, ಡಾ ಗಿರೀಶ್, ಡಾ. ಬಿ ಎಂ ಮೇಘನಾ, ಡಾ. ಅಜಯ್, ಡಾ. ಮಾರುತಿ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು. ವರದಿ ಆರ್ ಉಮೇಶ್ ಮಲಾರಪಾಳ್ಯ

Related Articles

Leave a Reply

Your email address will not be published. Required fields are marked *

Back to top button