ಇತ್ತೀಚಿನ ಸುದ್ದಿ
Trending

ದಕ್ಷಿಣಕನ್ನಡ ಜಿಲ್ಲೆಯಾದ್ಯಂತ, ಶಿವಮೊಗ್ಗದ 5 ತಾಲೂಕುಗಳ ಶಾಲೆಗೆ ಇಂದು ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್​ 29(ಶುಕ್ರವಾರ) ರಂದು ಜಿಲ್ಲೆಯ ಶಾಲೆ, ಪ್ರೌಢಶಾಲೆ, ಪಿಯು ಕಾಜೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ , ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಆ.29 ರಂದು ರಜೆ ಘೋಷಿಸಲಾಗಿರುತ್ತದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ:: ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರೆದಿದೆ. ಇಂದು 5 ತಾಲೂಕುಗಳ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಆಯಾ ತಹಶೀಲ್ದಾರರು ರಜೆ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಶಿವಮೊಗ್ಗ, ಸಾಗರ, ಹೊಸನಗರ, ಸೊರಬ ಹಾಗೂ ಶಿಕಾರಿಪುರ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದಿನ ತರಗತಿಗಳನ್ನು ಮುಂದಿನ ದಿನಗಳಲ್ಲಿ ತೆಗೆದುಕೊಂಡು ಪಾಠ ಪ್ರವಚನ ನಡೆಸುವಂತೆ ಸೂಚಿಸಲಾಗಿದೆ. ಉಳಿದಂತೆ ಭದ್ರಾವತಿ ಹಾಗೂ ತೀರ್ಥಹಳ್ಳಿ ತಾಲೂಕಿನ‌ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಆಗಿಲ್ಲ.‌

ರಾಜ್ಯಾದ್ಯಂತ ಮತ್ತೆ ಮಳೆ: ಹವಾಮಾನ ಇಲಾಖೆ ರಾಜ್ಯದಲ್ಲಿ ಆಗಸ್ಟ್​​ 27ರಿಂದ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಿತ್ತು. ಮುನ್ಸೂಚನೆ ಪ್ರಕಾರ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಹಾಗೆಯೇ, ಸೆ.1ರ ವರೆಗೂ ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿತ್ತು. ಆದರೆ ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಿರೀಕ್ಷೆಗೂ ಅಧಿಕ ಮಳೆಯಾಗುತ್ತಿದೆ.

ಜೊತೆಗೆ, ಉಳಿದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ, ದಾವಣಗೆರೆ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ವಿಜಯನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಗಳಲ್ಲಿಯೂ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿತ್ತು.

Related Articles

Leave a Reply

Your email address will not be published. Required fields are marked *

Back to top button