ಇತ್ತೀಚಿನ ಸುದ್ದಿ
Trending

ಮನೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ 15 ವರ್ಷದ ಬಾಲಕಿ.. ಸಹೋದರನಿಂದಲೇ ಕೃತ್ಯ!

ಕೆಲ ದಿನಗಳ ಹಿಂದೆ ಯಾದಗಿರಿ ಜಿಲ್ಲೆಯಲ್ಲಿ ಶಾಲಾ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದ ಘಟನೆ ವರದಿಯಾಗಿತ್ತು. ಈ ಘಟನೆ ಮಾಸುವ ಮುನ್ನವೇ, ಮನೆಯ ಶೌಚಾಲಯದಲ್ಲಿ 15 ವರ್ಷದ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.‌

ಬಾಲಕಿಗೆ ಹೆರಿಗೆಯಾದ ನಂತರ ಬಾಲಕಿಗೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬಾಲಕಿಯ ಪೋಷಕರು ದೂರು ನೀಡಿರುವ ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ವಂತ ಅಣ್ಣನಿಂದಲೇ ಕೃತ್ಯ, ಬಂಧನ: 15 ವರ್ಷದ ಬಾಲಕಿಯು ಗರ್ಭ ಧರಿಸಲು ಆಕೆಯ 16 ವರ್ಷದ ಅಣ್ಣನೇ ಕಾರಣ ಎಂದು ಪೋಷಕರು ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಲಾಗಿದೆ. ಬಾಲಕಿಯು 9ನೇ ತರಗತಿ‌ ಓದಿದ್ದು, ಶಾಲೆ ಬಿಟ್ಟು ಮನೆಯಲ್ಲಿಯೇ ಇರುತ್ತಿದ್ದಳು. ಪೋಷಕರು ಕೆಲಸಕ್ಕೆ ಹೋದಾಗ ಸಹೋದರ ದುಷ್ಕೃತ್ಯ ಎಸಗಿದ್ದಾನೆ. ಈ ಬಗ್ಗೆ ಪೋಷಕರಿಗೆ ಹೇಳದಂತೆ ಬಾಲಕಿಗೆ ಬೆದರಿಕೆ ಹಾಕಿದ್ದ ಎಂದು ತಿಳಿದು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಾಲಕಿಯು ಏಳೂವರೆ ತಿಂಗಳಿಗೇ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಮಗುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೋಷಕರು ನೀಡಿದ ದೂರಿನಂತೆ, 16 ವರ್ಷದ ಬಾಲಕನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಯಾದಗಿರಿ ಶಾಲೆ ಶೌಚಾಲಯದಲ್ಲೇ ಗಂಡು ಮಗುವಿಗೆ ಜನ್ಮ: ಸರ್ಕಾರಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಆಗಸ್ಟ್ 27ರಂದು ಮಧ್ಯಾಹ್ನ ನಡೆದಿತ್ತು.

ಬಾಲಕಿಗೆ ಹೆರಿಗೆ ನೋವು ಕಾಣಿಸಿಕೊಂಡಿರುವುದನ್ನು ಗಮನಿಸಿದ ಸಹಪಾಠಿಗಳು ಶಾಲಾ ಆಡಳಿತ ಮಂಡಳಿಗೆ ಮಾಹಿತಿ ನೀಡಿದ ನಂತರ, ಈ ವಿಷಯ ಬೆಳಕಿಗೆ ಬಂದಿತ್ತು. ಬಾಲಕಿ ಪೂರ್ಣಾವಧಿ ಗರ್ಭಿಣಿಯಾಗಿದ್ದಳು. ಸುಮಾರು ಒಂಬತ್ತು ತಿಂಗಳ ಹಿಂದೆ ಅಪರಿಚಿತ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಳು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿಗಳ ವಿರುದ್ಧ ಪೋಕ್ಸೊ ಕೇಸ್: ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ, ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್​​ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಂಶುಪಾಲ, ಹಾಸ್ಟೆಲ್ ವಾರ್ಡನ್ ಸೇರಿ ನಾಲ್ವರು ಸಸ್ಪೆಂಡ್‌, FIR ದಾಖಲು: ಘಟನೆ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಆರೋಗ್ಯ ಸ್ಥಿತಿಗತಿಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯದ ಆರೋಪದ ಮೇಲೆ ಪ್ರಾಂಶುಪಾಲರು ಮತ್ತು ಹಾಸ್ಟೆಲ್ ವಾರ್ಡನ್ ಸೇರಿದಂತೆ ಶಾಲೆಯ ನಾಲ್ವರು ಉದ್ಯೋಗಿಗಳನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS) ಅಮಾನತುಗೊಳಿಸಿದೆ.

Related Articles

Leave a Reply

Your email address will not be published. Required fields are marked *

Back to top button