ಇತ್ತೀಚಿನ ಸುದ್ದಿ
Trending

ಮಾ.22 ಕರ್ನಾಟಕ ಬಂದ್ ರಾಜ್ಯ ಸರ್ಕಾರದ ನಿಲುವು ಸ್ಪಷ್ಟ ಪಡಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು : ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ, ರಾಜ್ಯ ಸರ್ಕಾರ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ರಾಜ್ಯ ಸರ್ಕಾರ ಬೆಂಬಲ ನೀಡಲಿದೆಯಾ ಎನ್ನುವುದರ ಬಗ್ಗೆ ಸದನದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆಯನ್ನು ನೀಡಿದ್ದಾರೆ.ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾ.22 ರಂದು ನಡೆಯಲಿರುವ ಕರ್ನಾಟಕ ಬಂದ್ ನಿಂದ ವಿದ್ಯಾರ್ಥಿಗಳ ಪರೀಕ್ಷೆಗೆ ತೊಂದರೆಯಾಗುತ್ತದೆ ಎನ್ನುವ ವಿಚಾರವನ್ನು ಪ್ರಸ್ತಾಪಿಸಿದರು.“ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿರುವ ಕಾರಣ ಬಂದ್ ಗಳಿಗೆ ಉತ್ತೇಜನ ನೀಡಲು ಸಾಧ್ಯವಿಲ್ಲ. ರಾಜಕೀಯವಾಗಿ ಹಾಗೂ ನ್ಯಾಯಲಯ ಸಹ ಇದಕ್ಕೆ ಬೆಂಬಲ ನೀಡುವುದಿಲ್ಲ. ಬಂದ್ ಕರೆ ನೀಡಿರುವವರಿಗೆ ತಿಳುವಳಿಕೆ ನೀಡುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.“ಈಗಾಗಲೇ ಪರೀಕ್ಷೆಗಳು ಪ್ರಾರಂಭವಾಗಿವೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕಾರಿಗಳ ಬಳಿ ಮಾತನಾಡಿ ಹೇಳಿಕೆ ನೀಡಲಾಗುವುದು” ಎಂದು ಸದನಕ್ಕೆ ಡಿ.ಕೆ.ಶಿವಕುಮಾರ್ ತಿಳಿಸಿದರು. ಆ ಮೂಲಕ, ಬಂದ್ ಗೆ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ನೇರವಾಗಿ ಡಿಸಿಎಂ ಹೇಳಿದ್ದಾರೆ.ನನಗೆ ಮದ ಏರಿದ್ದರೆ, ಇಳಿಸಲಿ. ನನಗೆ ಬೇಕಾದವರನ್ನು ನಾನು ಪ್ರೀತಿಯಿಂದ ಏನು ಬೇಕಾದರೂ ಕರೆಯುತ್ತೇನೆ. ಅದರಲ್ಲಿ ಇವರದೇನೂ? ಕೆಲವರು ತಮ್ಮ ಆಪ್ತರನ್ನು ಕಳ್ಳ ನನ್ನ ಮಗನೆ… ಅಂತ ಅನ್ನೋದು ಸೇರಿದಂತೆ ಇನ್ನು ಹಲವು ರೀತಿಯಲ್ಲಿ ಕರೆಯುತ್ತಾರೆ. ಅದು ನಮ್ಮ ಮತ್ತು ಅವರ ನಡುವಣ ಬಾಂಧವ್ಯದ ವಿಚಾರ. ಯಾವ ಛತ್ರಿನೂ ಇಲ್ಲ, ಏನೂ ಇಲ್ಲ” ಎಂದು ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದರು.ಬೆಂಗಳೂರಿನ ಅರಮನೆ ಮೈದಾನದಲ್ಲಿ ಯುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪ್ರೀತಿಯಿಂದ ಮಂಡ್ಯ ಭಾಗದ ಕೆಲವು ನಾಯಕರನ್ನು ಛತ್ರಿ ಎಂದು ಕರೆದಿರುವುದನ್ನು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅಧಿಕಾರದ ಮದ ಎಂದು ಟೀಕಿಸಿರುವ ಬಗ್ಗೆ ಕೇಳಿದಾಗ, ಡಿಸಿಎಂ ಮೇಲಿನಂತೆ ಉತ್ತರವನ್ನು ನೀಡಿದರು. ನನ್ನ ಮೇಲೆ ತನಿಖೆ ಮಾಡಿಸಿಲ್ಲವೇ? ಅವರ ಜತೆ ಸರ್ಕಾರ ಮಾಡಿದ್ದೇವೆ ಎಂದು ನಾವು ಸುಮ್ಮನೆ ಇದ್ದೇವೆ. ಅವರು ಮರ್ಯಾದೆಯಾಗಿ ಇದ್ದರೆ ಕ್ಷೇಮ ಎಂದು ಡಿಕೆಶಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಎಚ್ಚರಿಕೆಯನ್ನು ನೀಡಿದರು.ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆಯಲಾಗಿರುವ ಬಂದ್ ಗೆ ಕೆಲವು ಸಂಘಟನೆಗಳು ಬೆಂಬಲವನ್ನು ನೀಡಿವೆ. ಇನ್ನಷ್ಟು, ಸಂಘಟನೆಗಳು ಬಂದ್ ನಿಂದ ದೂರ ಸರಿದಿವೆ. ಎಸ್ಎಸ್ಎಲ್ಸಿ ಪರೀಕ್ಷೆಗಳು, ನಾಳೆ (ಮಾ.21) ಆರಂಭವಾಗಲಿದೆ. ಬಂದ್ ದಿನ ಯಾವುದೇ ಪರೀಕ್ಷೆಗಳು ಶೆಡ್ಯೂಲ್ ಆಗಿಲ್ಲ.ಪಿಯು ಮೌಲ್ಯಮಾಪನ ಮತ್ತು ಮೌಲ್ಯ ಮಾಪಕರಿಗೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ಪರೀಕ್ಷಾ ಮಂಡಳಿ ಸ್ಪಷ್ಟನೆಯನ್ನು ನೀಡಿದೆ. ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಿವಿಧ ಸಂಘಟನೆಗಳು ಬಂದ್ ಗೆ ಕರೆನೀಡಿದೆ.ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುತ್ತಾ ಎನ್ನುವ ವಿಚಾರದಲ್ಲಿ ಯಾವುದೇ ಅಂತಿಮ ನಿರ್ಧಾರವನ್ನು, ಖಾಸಗಿ ಶಾಲೆಗಳಾಗಲಿ ಜಿಲ್ಲಾಧಿಕಾರಿಗಳಾಗಲಿ ಇನ್ನೂ ತೆಗೆದುಕೊಂಡಿಲ್ಲ. ಹೋಟೆಲ್ ಮಾಲೀಕರ ಸಂಘವೂ, ಬಂದ್ ಗೆ ಬೆಂಬಲ ನೀಡುವ ವಿಚಾರದಲ್ಲಿ ಗೊಂದಲದಲ್ಲಿದೆ.


Related Articles

Leave a Reply

Your email address will not be published. Required fields are marked *

Back to top button